HomeKarnatakaBIG NEWS: ನಾಳೆಯೇ ದೆಹಲಿಗೆ ಬನ್ನಿ: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್

BIG NEWS: ನಾಳೆಯೇ ದೆಹಲಿಗೆ ಬನ್ನಿ: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್

ಬೆಂಗಳೂರು: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ. ಮೋಹನ್ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.

ನಾಳೆ ದೆಹಲಿಗೆ ಬರುವಂತೆ ವರಿಷ್ಠರು ಕರೆ ಮಾಡಿ ಸೂಚನೆ ನೀಡಿದ್ದಾರೆ. ನಾಳೆ ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವಾರ ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು. ಆದರೆ, ದೆಹಲಿಗೆ ಹೋದರೂ ಅವರನ್ನು ಭೇಟಿ ಮಾಡದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಾಪಸ್ ಕಳುಹಿಸಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular