HomeKarnatakaರಾಜ್ಯ ಬಿಜೆಪಿ ನಾಯಕರಿಗೆ ನಂಬರ್ 40 ಚೆನ್ನಾಗಿ ಒಪ್ಪುತ್ತೆ, ಅಷ್ಟೇ ಸ್ಥಾನ ನೀಡಿ: ರಾಹುಲ್ ಗಾಂಧಿ

ರಾಜ್ಯ ಬಿಜೆಪಿ ನಾಯಕರಿಗೆ ನಂಬರ್ 40 ಚೆನ್ನಾಗಿ ಒಪ್ಪುತ್ತೆ, ಅಷ್ಟೇ ಸ್ಥಾನ ನೀಡಿ: ರಾಹುಲ್ ಗಾಂಧಿ

ಬಳ್ಳಾರಿ: ರಾಜ್ಯ ಬಿಜೆಪಿ ನಾಯಕರಿಗೆ 40 ನಂಬರ್ ಚೆನ್ನಾಗಿ ಒಪ್ಪುತ್ತದೆ. ಬಿಜೆಪಿಗೆ 40 ಸ್ಥಾನ ಮಾತ್ರ ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಳ್ಳಾರಿಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಯಾರು ಗೆಲ್ಲಬೇಕು ಎಂದು ನೀವು ನಿರ್ಣಯ ತೆಗೆದುಕೊಳ್ಳಬೇಕು. ನೀವು ಗೆಲ್ಲಿಸಿದ ಶಾಸಕರನ್ನು ಕಿತ್ತುಕೊಂಡು ಸರ್ಕಾರ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 140 -150 ಸ್ಥಾನ ಗೆಲ್ಲಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಘೋಷಿಸಿರುವ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಬಳ್ಳಾರಿಯಲಿ ಜೀನ್ಸ್ ಪಾರ್ಕ್ ಸ್ಥಾಪನೆ ಮಾಡುತ್ತೇವೆ. ಸಾಮಾನ್ಯವಾಗಿ ಭರವಸೆ ನೀಡಲ್ಲ. ನೀಡಿದ್ರೆ ಮಾಡಿ ತೋರಿಸುವೆ. ಪ್ರಧಾನಿ ಮೋದಿ ಅವರ ರೀತಿ ನಾನು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ನಾವು ಅಧಿಕಾರದಲ್ಲಿದ್ದಾಗ 371ಜೆ ಜಾರಿ ಮಾಡಿದ್ದೇವೆ. ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕದಲ್ಲಿ ಬೋರ್ಡ್ ಸಹ ಸ್ಥಾಪಿಸಲಿಲ್ಲ ಎಂದು ದೂರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular