HomeLatest Newsಬಿಜೆಪಿ ಮುಖಂಡನ ಪುತ್ರನಿಂದ ಲವ್, ಸೆಕ್ಸ್, ದೋಖಾ: ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ

ಬಿಜೆಪಿ ಮುಖಂಡನ ಪುತ್ರನಿಂದ ಲವ್, ಸೆಕ್ಸ್, ದೋಖಾ: ಕೇಸ್ ದಾಖಲಾದ ಬೆನ್ನಲ್ಲೇ ನಾಪತ್ತೆ

ಪುತ್ತೂರು: ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಯುವಕನೊಬ್ಬನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರಿನ ಬಪ್ಪಳಿಗೆ ನಿವಾಸಿ ಬಿಜೆಪಿ ಮುಖಂಡ ಬಿಜೆಪಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್(21) ವಿರುದ್ಧ ಪ್ರಕರಣ ದಾಖಲಾಗಿದೆ. 21 ವರ್ಷದ ಸಂತ್ರಸ್ತೆ ಕೂಡ ಪುತ್ತೂರು ನಿವಾಸಿಯಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. 2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಕೃಷ್ಣ ಸಂತ್ರಸ್ತೆಯನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ವಿರೋಧಿಸಿದಾಗ ಮದುವೆಯಾಗುವುದಾಗಿ ನಂಬಿಸಿದ್ದ. 2025ರ ಜನವರಿಯಲ್ಲಿ ಮತ್ತೊಮ್ಮೆ ದೈಹಿಕ ಸಂಪರ್ಕ ಬೆಳೆಸಿದ್ದು, ಇದರಿಂದ ಯುವತಿ ಗರ್ಭಿಣಿಯಾಗಿದ್ದಳು.

ವಿಚಾರವನ್ನು ಪೋಷಕರಿಗೆ ತಿಳಿಸಿದಾಗ ಅವರು ಯುವಕನ ಮನೆಯವರಿಗೆ ಹೇಳಿದ್ದಾರೆ. ಮಾತುಕತೆ ನಡೆದು ಮದುವೆಗೆ ಹುಡುಗನ ಕಡೆಯವರು ಒಪ್ಪಿಗೆ ನೀಡಿದ್ದಾರೆ. ಆದರೆ, ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ ಎನ್ನಲಾಗಿದ್ದು, ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular