ಬೆಳಗಾವಿ: ರೈತರ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಇಂದು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ.
ಬಿಜೆಪಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು. ಕಬ್ಬು, ಮೆಕ್ಕೆಜೋಳ, ಭತ್ತ, ತೊಗರಿ ಬೆಳೆಗಾರರಿಗೆ ಸರ್ಕಾರದಿಂದ ಅನ್ಯಾಯವಾಗಿದೆ. ಅನ್ಯಾಯ ಖಂಡಿಸಿ ಇಂದು ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ. ಪ್ರತಿಭಟನೆಯಲ್ಲಿ 20 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಇದೆ.
