HomeLive NewsBREAKING NEWS: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ಶವವಾಗಿ ಪತ್ತೆ!

BREAKING NEWS: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ಶವವಾಗಿ ಪತ್ತೆ!

ಮಂಗಳೂರು: ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ ಪಾಣೆಮಂಗಳೂರಿನ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ರಮೇಶ್ ಗೆದ್ದಿದ್ದರು.

ಇಂದು ಬೆಳಿಗ್ಗೆ ರಮೇಶ್ ರೈ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಹಾಗೂ ಬೈಕ್ ನೇತ್ರಾವತಿ ನದಿ ಸೇತುವೆ ಬಳಿ ಪತ್ತೆಯಾಗಿತ್ತು. ಅನುಮಾನಗೊಂಡು ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹುಡುಕಾಟ ನಡೆಸಿದಾಗ ರಮೇಶ್ ಅವರ ಶವ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular