HomeKarnatakaBIG NEWS: ಶಾಸಕ ಯತ್ನಾಳ್ ವಿರುದ್ಧ ಸ್ವಪಕ್ಷದ ಬಿಜೆಪಿ ನಾಯಕರಿಂದಲೇ ಪ್ರತಿಭಟನೆ: ಉಚ್ಛಾಟನೆಗೆ ಆಗ್ರಹ

BIG NEWS: ಶಾಸಕ ಯತ್ನಾಳ್ ವಿರುದ್ಧ ಸ್ವಪಕ್ಷದ ಬಿಜೆಪಿ ನಾಯಕರಿಂದಲೇ ಪ್ರತಿಭಟನೆ: ಉಚ್ಛಾಟನೆಗೆ ಆಗ್ರಹ

ತುಮಕೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಈವರೆಗೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದರು. ಇದೀಗ ಪಕ್ಷದ ನಾಯಕರೂ ಯತ್ನಾಳ್ ಉಚ್ಛಾಟನೆಗೆ ಪಟ್ಟು ಹಿಡಿದಿರುವ ಘಟನೆ ನಡೆದಿದೆ.

ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಯತ್ನಾಳ್ ಉಚ್ಛಾಟನೆಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ತುಮಕೂರಿನ ಕುಣಿಗಲ್ ಬಳಿಯ ಯಡಿಯೂರು ಸಿದ್ದಲಿಂಗೇಶ್ವರ ದೇಗುಲದ ಮುಂದೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಯತ್ನಾಳ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular