BREAKING : ನ.17 ರ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ : ಬಿ.ವೈ.ವಿಜಯೇಂದ್ರ

ಬೆಂಗಳೂರು : ನ.17 ರಂದು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ನ.17 ರಂದು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನಿಗದಿಯಂತೆ ಸಭೆ ನಡೆಯಲಿದ್ದು, ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ. ವೀಕ್ಷಕರಾಗಿ ಯಾರು ಬರುತ್ತಾರೆ ಎಂಬುದು ನಾಳೆ ಗೊತ್ತಾಗುತ್ತದೆ. ಸಮಾವೇಶ ಬಗ್ಗೆ ಹಿರಿಯರ ಜೊತೆ ಚರ್ಚಿಸಿದ ನಂತರ ತೀರ್ಮಾನ ಮಾಡಲಾಗುವುದು. ಶಾಸಕರ ಸಮ್ಮುಖದಲ್ಲಿ ವಿಪಕ್ಷ ನಾಯಕರ ಘೋಷಣೆ ನಿರೀಕ್ಷೆಯಿದೆ ಎಂದು ಹೇಳಿದರು.

ಇನ್ನೂ, ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಇಂದು ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಹೋಮ, ಹವನ ವಿಶೇಷ ಪೂಜೆಯೊಂದಿಗೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ನಳಿನ್ ಕುಮಾರ್ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read