ಧಾರವಾಡ: ಧಾರವಾಡದ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಕಲಾ ಮಸೂತಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈಶ್ವರ್ ಮಸೂತಿ (50) ಆತ್ಮಹತ್ಯೆಗೆ ಶರಣಾದವರು. ಧಾರವಾಡದ ಉಪ್ಪಿನ ಬೆಟಗೇರಿ ಗ್ರಾಮದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಶ್ವರ್ ಮಸೂತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಆರೋಗ್ಯ ಸಮಸ್ಯೆ ಕಾರಣ ಎನ್ನಲಾಗಿದೆ.
ಈಶ್ವರ್ ಮಸೂತಿ ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕಿ ಸೀಮಾ ಮಸೂತಿ ಸಂಬಂಧಿ. ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಕಲಾ ಪತಿ ಎಂದು ತಿಳಿದುಬಂದಿದೆ.
ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.