HomeIndiaಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆ: ಬಿಜೆಪಿ ಮಹಿಳಾ ಮೋರ್ಚಾದಿಂದ ತೀವ್ರಗೊಂಡ ಪ್ರತಿಭಟನೆ: ರಾಹುಲ್ ಗಾಂಧಿ ನಿವಾಸಕ್ಕೆ...

ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆ: ಬಿಜೆಪಿ ಮಹಿಳಾ ಮೋರ್ಚಾದಿಂದ ತೀವ್ರಗೊಂಡ ಪ್ರತಿಭಟನೆ: ರಾಹುಲ್ ಗಾಂಧಿ ನಿವಾಸಕ್ಕೆ ಮುತ್ತಿಗೆ ಯತ್ನ

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೀದೆಗೆ ಹಿನ್ನಡೆಯಾಗಿದ್ದನ್ನು ಖಂಡಿಸಿ ದೆಹಲಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಹಾಗೂ ಬಿಜೆಪಿ ಸಂಸದರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಎಂದು ಕಿಡಿಕಾರಿದ ಪ್ರತಿಭಟನಾಕಾರರು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ರಾಹುಲ್ ಗಾಂಧಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ರಾಹುಲ್ ನಿವಾಸದತ್ತ ಮುನ್ನುಗ್ಗಿದ್ದಾರೆ. ಈ ವೇಳೆ ಪೊಲೀಸರು ರಸ್ತೆಯಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ತಡೆದಿದ್ದಾರೆ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಮಹಿಳಾ ಕಾರ್ಯಕರ್ತೆಯರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ಬ್ಯಾರಿಕೇಡ್ ಗಳ ಮೇಲೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನದತ್ತ ತಿರುಗುತ್ತಿದ್ದಂತೆ ಪೊಲೀಸರು ಬಿಜೆಪಿ ಸಂಸದರು ಹಾಗೂ ಮಹಿಳಾ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ರಾಹುಲ್ ಗಾಂಧಿ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular