HomeIndiaಮಹಿಳೆಯರಿಗೆ ಮೆಟ್ರೋ, ಬಸ್ ಪ್ರಯಾಣದಲ್ಲಿ ರಿಯಾಯಿತಿ ಘೋಷಣೆ ಮಾಡಿದ ಬಿಜೆಪಿ!

ಮಹಿಳೆಯರಿಗೆ ಮೆಟ್ರೋ, ಬಸ್ ಪ್ರಯಾಣದಲ್ಲಿ ರಿಯಾಯಿತಿ ಘೋಷಣೆ ಮಾಡಿದ ಬಿಜೆಪಿ!

ಕರ್ನಾಟಕದಲ್ಲಿ ಕಾಂಗ್ರೆಸ್ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ನೀಡುತ್ತದೆ. ಈ ಯೋಜನೆಯನ್ನು ಸದಾ ಟೀಕಿಸುವ ಪ್ರತಿಪಕ್ಷ ಬಿಜೆಪಿ ಇದನ್ನು ನಕಲು ಮಾಡಲು ಹೊರಟಿದೆ.

ಹೌದು, ಮಹಾರಾಷ್ಟ್ರ ರಾಜ್ಯದ ಪುಣೆ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದೆ. 41 ವಾರ್ಡ್‌ಗಳ, 165 ಕಾರ್ಪೊರೇಟರ್‌ಗಳ ಆಯ್ಕೆಗೆ ಜನವರಿ 15ರಂದು ಚುನಾವಣೆ ನಡೆಯಲಿದೆ. ಜನವರಿ 16ರಂದು ಫಲಿತಾಂಶ ಪ್ರಕಟವಾಗಲಿದೆ.

ಪುಣೆ ಸಂಸದ ಮುರಳೀಧರ್ ಮೊಹಲ್, ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್ ಪಾಟೀಲ್ ಹಾಗೂ ಮಾಧುರಿ ಮಿಸಾಲ್ ಸೇರಿದಂತೆ ಹಲವು ನಾಯಕರು ಬಿಜೆಪಿ ಪಕ್ಷದ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಣಾಳಿಕೆಯಲ್ಲಿ ಬಿಜೆಪಿ ಪುಣೆಯಲ್ಲಿ ಅಧಿಕಾರಕ್ಕೆ ಬಂದರೆ ಮೆಟ್ರೋ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರಕ್ಕೆ ರಿಯಾಯಿತಿ ನೀಡಲಾಗುತ್ತದೆ ಎಂದು ಬಿಜೆಪಿ ಪಕ್ಷ ಭರವಸೆಯನ್ನು ನೀಡಿದೆ.

ಬಿಜೆಪಿ ಪ್ರಣಾಳಿಕೆಯ ಭರವಸೆಗಳು

  • 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನಗರ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ
  •  ಬಡ ಮಹಿಳೆಯರಿಗೆ ಪ್ರತಿ ತಿಂಗಳು 2,500 ಆರ್ಥಿಕ ಸಹಾಯ
  • 500 ಚದರ ಅಡಿಗಿಂತ ಕಡಿಮೆ ಆಳತೆಯಲ್ಲಿರುವ ಮನೆ, ಫ್ಲ್ಯಾಟ್‌ಗಳ ಆಸ್ತಿ ತೆರಿಗೆ ಮನ್ನ
  • 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಆರೋಗ್ಯ ತಪಾಸಣೆ
  • ಪುಣೆಯಲ್ಲಿ ಶೀಘ್ರವೇ ಏಮ್ಸ್ ಆಸ್ಪತ್ರೆ ನಿರ್ಮಾಣ
  • ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇನಲ್ಲಿ ಡೇಟಾ ಸೆಂಟರ್ ನಿರ್ಮಾಣ

ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ (ಏಕನಾಥ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ನೇತೃತ್ವದ ಮಹಾಯತಿ ಮೈತ್ರಿಕೂಟ ಅಧಿಕಾರದಲ್ಲಿದೆ. ಆದರೆ ಪುಣೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧೆ ಮಾಡುವ ಮೂಲಕ ಕುತೂಹಲ ಮೂಡಿಸಿದೆ.

ಸಂಸದ ಮುರಳೀಧರ್ ಮೊಹಲ್ ಮಾತನಾಡಿ, “ಪುಣೆ ನಗರದಲ್ಲಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಲಾಗುತ್ತದೆ. ಶೀಘ್ರದಲ್ಲೇ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ” ಎಂದು ಹೇಳಿದರು.

ಪುಣೆ ಮಹಾನಗರ ಪಾಲಿಕೆ ಚುನಾವಣೆಗೆ ಶಿವಸೇನೆ (ಏಕನಾಥ ಶಿಂಧೆ ಬಣ) 123, ಅಜಿತ್ ಪವಾರ್ (ಎನ್‌ಸಿಪಿ) 138, ಕಾಂಗ್ರೆಸ್ 93, ಶರದ್ ಪವಾರ್ (ಎನ್‌ಸಿಪಿ), ಶಿವಸೇನೆ (ಉದ್ಭವ್ ಠಾಕ್ರೆ) ಬಣದ 44 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular