HomeKarnatakaBIG NEWS: ಬಿಜೆಪಿಯಲ್ಲಿ ಮತ್ತಷ್ಟು ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ

BIG NEWS: ಬಿಜೆಪಿಯಲ್ಲಿ ಮತ್ತಷ್ಟು ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ

ದಾವಣಗೆರೆ: ಬಿಜೆಪಿಯಲ್ಲಿ ವಿಜಯೇಂದ್ರ ಹಠಾವೋ ಹೋರಾಟ ಹೆಚ್ಚಾಗಿದ್ದು, ಇಂದು ದಾವಣಗೆರೆಯಲ್ಲಿ ಪಕ್ಷದ ನಾಯಕರ ಮಹತ್ವದ ಸಭೆ ನಡೆಯಲಿದೆ.

ದಾವಣಗೆರೆಯ ಜಿಎಂಐಟಿ ಕಾಲೇಜು ಅತಿಥಿ ಗೃಹದಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ, ದಾವಣಗೆರೆಯ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತರಾಗಿದ್ದ ಸಿದ್ದೇಶ್ವರ ಅಧ್ಯಕ್ಷತೆಯದಲ್ಲಿ ಸಭೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ. ಸಭೆಯಲ್ಲಿ ಹಲವು ಶಾಸಕರು, ಮಾಜಿ ಶಾಸಕರು. ನಾಯಕರು ಭಾಗವಹಿಸಲಿದ್ದಾರೆ. ಸಭೆಯ ನಂತರ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯೇಂದ್ರ ನಾಯಕತ್ವ ಒಪ್ಪಲ್ಲ ಎಂದು ಬಹಿರಂಗವಾಗಿಯೇ ಹೇಳಿರುವ ರಮೇಶ್ ಜಾರಕಿಹೊಳಿ ಸೇರಿ ಹಲವು ಪ್ರಮುಖರು ಈಗಾಗಲೇ ಅನೇಕ ಬಾರಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇಂದು ದಾವಣಗೆರೆಯಲ್ಲಿ ನಡೆಯುವ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular