HomeKarnatakaBIG NEWS: ಬಿಜೆಪಿಯಿಂದ ಮತದಾರರ ಜಾಗೃತಿ ಅಭಿಯಾನ; ಬಿ.ಎಲ್.ಸಂತೋಷ್ ನೇತೃತ್ವದ ಸಭೆಗೆ ಗೈರಾದ ಎಸ್.ಟಿ.ಸೋಮಶೇಖರ್, ಹೆಬ್ಬಾರ್;...

BIG NEWS: ಬಿಜೆಪಿಯಿಂದ ಮತದಾರರ ಜಾಗೃತಿ ಅಭಿಯಾನ; ಬಿ.ಎಲ್.ಸಂತೋಷ್ ನೇತೃತ್ವದ ಸಭೆಗೆ ಗೈರಾದ ಎಸ್.ಟಿ.ಸೋಮಶೇಖರ್, ಹೆಬ್ಬಾರ್; ಕುತೂಹಲ ಮೂಡಿಸಿದ ಶಾಸಕರ ನಡೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ನಡೆದ ಬಿಜೆಪಿ ಮತದಾರರ ಜಾಗೃತಿ ಅಭಿಯಾನ ಸಭೆಗೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವರು ಗೈರಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಮತದಾರರ ಜಗೃತಿ ಅಭಿಯಾನ ನಿಟ್ಟಿನಲ್ಲಿ ಸಂಸದರು, ಶಾಸಕರು, ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಶಾಸಕರಾದ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಶಂಕರ ಪಾಟೀಲ್ ಮುನೇನಕೊಪ್ಪ, ವಿ.ಸೋಮಣ್ಣ ಸೇರಿದಂತೆ ಹಲವರು ಗೈರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್ ಬಿಜೆಪಿ ಶಾಸಕರನ್ನು ಸೆಳೆಯುತ್ತಿದೆ ಎಂಬ ಸುದ್ದಿ ಬೆನ್ನಲ್ಲೇ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಅಲ್ಲದೇ ಇಬ್ಬರು ಶಾಸಕರು ಮರಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆ ಕೂಡ ನಡೆಯುತ್ತಿದೆ. ಈ ಬೆಳವಣಿಗೆ ನಡುವೆಯೇ ಇದೀಗ ಬಿಜೆಪಿ ಸಭೆಗೆ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಶಂಕರ ಪಾಟೀಲ್ ಮುನೇನಕೊಪ್ಪ ಗೈರಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

ಇನ್ನು ಇಂದು ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಹಾರಾಟ ಆರಂಭವಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶಾಸಕ ಅರಗ ಜ್ಞಾನೇಂದ್ರ, ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ, ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ ಸಭೆಗೆ ಗೈರಾಗಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸಭೆಗೆ ಆಗಮಿಸಿಲ್ಲ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular