HomeKarnatakaಡೆಪ್ಯೂಟಿ ಸ್ಪೀಕರ್ ಮೇಲೆ ಪೇಪರ್ ಚೂರು ಎಸೆದ ಬಿಜೆಪಿ ಸದಸ್ಯರು : ಕಾನೂನು ಕ್ರಮಕ್ಕೆ ಆಗ್ರಹಿಸಿದ...

ಡೆಪ್ಯೂಟಿ ಸ್ಪೀಕರ್ ಮೇಲೆ ಪೇಪರ್ ಚೂರು ಎಸೆದ ಬಿಜೆಪಿ ಸದಸ್ಯರು : ಕಾನೂನು ಕ್ರಮಕ್ಕೆ ಆಗ್ರಹಿಸಿದ ಶಾಸಕ ಶಿವಲಿಂಗೇಗೌಡ

ಬೆಂಗಳೂರು : ಡೆಪ್ಯೂಟಿ ಸ್ಪೀಕರ್ ಮೇಲೆ ಪೇಪರ್ ಚೂರು ಎಸೆದ ಬಿಜೆಪಿ ಸದಸ್ಯರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದ್ದಾರೆ.

ಬಿಜೆಪಿಯವರು ದಲಿತ ಅಧ್ಯಕ್ಷನ ಮೇಲೆ ಪೇಪರ್ ಎಸೆಯುತ್ತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಕಾನೂನು ಕ್ರಮ ಆಗಬೇಕು ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದರು.
ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಸದಸ್ಯರು ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ವಿಧೇಯಕಗಳನ್ನು ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆಯೇ ಕಾಗದಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು, ನಿನ್ನೆ ನಡೆದ ವಿಪಕ್ಷ ನಾಯಕರ ಸಭೆಗೆ ಸರ್ಕಾರ ಶಿಷ್ಠಾಚಾರ ಉಲ್ಲಂಘನೆ ಮಾಡಿ ಐಎಎಸ್ ಅಧಿಕಾರಿಗಳನ್ನು ನೇಮಿಸಿದೆ ಎಂದು ಆರೋಪಿಸಿ ಸದನದ ಬಾವಿಗಿಳಿದು ಪ್ರತಿಭಟಿಸಲು ಮುಂದಾದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.ಈ ವೇಳೆ ಮಾಜಿ ಸಚಿವ ಆರ್.ಅಶೋಕ್, ಅಶ್ವತ್ಥನಾರಾಯಣ ಸೇರಿದಂತೆ ಬಿಜೆಪಿ ಸದಸ್ಯರು ವಿಧೇಯಕಗಳನ್ನು ಹರಿದು ಹಾಕಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮೇಲೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular