HomeKarnatakaBIG NEWS: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಫಿಕ್ಸ್; ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

BIG NEWS: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಫಿಕ್ಸ್; ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಚಾಮರಾಜನಗರದಲ್ಲಿ ಬರ ಅಧ್ಯಯನ ಹಿನ್ನೆಲೆಯಲ್ಲಿ ಭೇಟಿ ನೀಡಿದ ಶಾಸಕ ಯತ್ನಾಳ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಫಿಕ್ಸ್ ಆಗಿದೆ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಅಥವಾ ಅದರೊಳಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದು ಖಚಿತ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಅವರಿಗೆ ಖುರ್ಚಿ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ. ಕಾಂಗ್ರೆಸ್ ನವರು ಬರಗಾಲದ ಬಗ್ಗೆ ಚರ್ಚೆ ಮಾಡ್ತಿಲ್ಲ. ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ಸಿಎಂ ಖುರ್ಚಿ ಉಳಿಸಿಕೊಳ್ಳಲು ಚಿಂತಿಸುತ್ತಿದ್ದಾರೆ. ಇನ್ನು ಡಿಸಿಎಂ ರಾಮನಗರವನ್ನು ರಹಿಮ್ ನಗರ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರ ಕಾಲ್ಗುಣದಿಂದ ರಾಜ್ಯದಲ್ಲಿ ಬರಗಾಲ ಬಂದಿದೆ. ನಮ್ಮ ಪ್ರವಾಸ ಆರಂಭವಾದ ಬಳಿಕ ಮಳೆಯಾಗಿದೆ. ಚಾಮರಾಜನಗರ, ಮೈಸೂರು ಭಾಗದಲ್ಲಿ ಮಳೆಯಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular