ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ‘ಬಿಕ್ಲು ಶಿವ’ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಹೌದು. ಬಿಕ್ಲು ಶಿವ ಭೀಕರ ಕೊಲೆ ಪ್ರಕರಣದ ತನಿಖೆಯಲ್ಲಿ ಕೆ.ಆರ್. ಪುರಂ ಶಾಸಕ ಭೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಫೆಬ್ರವರಿ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಹತ್ವದ ಆದೇಶ ನೀಡಿದೆ. ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಮಾಜಿ ಸಚಿವರನ್ನು ಪೊಲೀಸರು ಇಂದು ಬಿಗಿ ಭದ್ರತೆಯಲ್ಲಿ ಕೋರ್ಟ್‌ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಅವರನ್ನು ಜೈಲಿಗಟ್ಟಿದ್ದಾರೆ. ಈ ಬೆಳವಣಿಗೆಯಿಂದಾಗಿ ಭೈರತಿ ಬಸವರಾಜ್ ಈಗ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಶಾಸಕ ಬೈರತಿ ಬಸವರಾಜ್ ಅವರನ್ನು ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಹೊರಡಿಸಿದೆ.ಈ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರು 5ನೇ ಆರೋಪಿಯಾಗಿದ್ದಾರೆ .
ಬೆಂಗಳೂರಿನಲ್ಲಿ ನಡೆದಿದ್ದ ಬಿಕ್ಲು ಶಿವ ಎಂಬುವವರ ಹತ್ಯೆ ಪ್ರಕರಣದಲ್ಲಿ ಶಾಸಕರ ಪಾತ್ರವಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.
ಇಂದು ಪೊಲೀಸರು ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಪ್ರಕರಣದ ತೀವ್ರತೆಯನ್ನು ಪರಿಗಣಿಸಿ ಮುಂದಿನ ಕೆಲವು ದಿನಗಳ ಕಾಲ ಜೈಲು ಶಿಕ್ಷೆಗೆ (ನ್ಯಾಯಾಂಗ ಬಂಧನ) ಆದೇಶಿಸಿದ್ದಾರೆ.ಈ ಬೆಳವಣಿಗೆಯಿಂದಾಗಿ ಬೈರತಿ ಬಸವರಾಜ್ ಅವರು ಸದ್ಯ ಜೈಲು ಪಾಲಾಗಿದ್ದು, ಅವರ ಬೆಂಬಲಿಗರು ಮತ್ತು ರಾಜಕೀಯ ವಲಯದಲ್ಲಿ ಭಾರಿ ಆತಂಕ ಮನೆಮಾಡಿದೆ. ಅವರನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

