HomeKarnatakaಮತ್ತೊಂದು ಕ್ಷೇತ್ರದ ಬಿಜೆಪಿ ಬಂಡಾಯ ಶಮನ: ಶಾಸಕ ಚಂದ್ರಪ್ಪ ಮನವೊಲಿಸುವಲ್ಲಿ BSY, ವಿಜಯೇಂದ್ರ ಯಶಸ್ವಿ

ಮತ್ತೊಂದು ಕ್ಷೇತ್ರದ ಬಿಜೆಪಿ ಬಂಡಾಯ ಶಮನ: ಶಾಸಕ ಚಂದ್ರಪ್ಪ ಮನವೊಲಿಸುವಲ್ಲಿ BSY, ವಿಜಯೇಂದ್ರ ಯಶಸ್ವಿ

ಬೆಂಗಳೂರು: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಮನವೊಲಿಕೆ ಯಶಸ್ವಿಯಾಗಿದೆ.

ಚಂದ್ರಪ್ಪ ಅವರ ಮನವೊಲಿಸುವಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಶಸ್ವಿಯಾಗಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಚಂದ್ರಪ್ಪ ಸಮಾಲೋಚನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಕೆಲಸ ಮಾಡಲು ಚಂದ್ರಪ್ಪ ಮತ್ತು ಟಿಕೆಟ್ ಆಕಾಂಕ್ಷಿಯಾಗಿದ್ದ ಅವರ ಪುತ್ರ ರಘು ಚಂದನ್ ಒಪ್ಪಿಗೆ ಸೂಚಿಸಿದ್ದಾರೆ.

ಚಿತ್ರದುರ್ಗದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷೇತರರಾಗಿ ಸ್ಪರ್ಧಿಸಲು ರಘು ಚಂದ್ರನ್ ಚಿಂತನೆ ನಡೆಸಿದ್ದರು.

ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಚಂದ್ರಪ್ಪ, ಚಿತ್ರದುರ್ಗ ಕ್ಷೇತ್ರದಿಂದ ನನ್ನ ಮಗ ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪನವರು ನನ್ನ ಜೊತೆ, ಬೆಂಬಲಿಗರ ಜೊತೆ ಮಾತನಾಡಿದ್ದಾರೆ. ಅವರ ಮಾತಿಗೆ ಗೌರವ ಕೊಟ್ಟು ನನ್ನ ಮಗ ಪಕ್ಷೇತರನಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular