ಭಯೋತ್ಪಾದಕರನ್ನು ಬಂಧಿಸಿದ್ರೂ ಠಾಣೆಗೆ ನುಗ್ಗಿ ಪ್ರಶ್ನೆ ಮಾಡ್ತೀರಾ ? ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಠಾಣೆಗೆ ನುಗ್ಗಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡಿಪಡಿಸಿದ್ದ ಆರೋಪದಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ ಐಆರ್ ದಾಖಲಾಗಿದೆ. ತನ್ನ ವಿರುದ್ಧದ ಎಫ್ ಐ ಆರ್ ರದ್ದು ಕೋರಿ ಹೈಕೋರ್ಟ್ ಗೆ ಹರೀಶ್ ಪೂಂಜಾ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಹೈಕೋರ್ಟ್, ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಶಾಸಕರಾದ ಮಾತ್ರಕ್ಕೆ ಪೊಲೀಸ್ ಠಾಣೆಗೆ ನುಗ್ಗಿ, ಅವರ ಕೆಲಸಕ್ಕೆ ಅಡ್ಡಿಪಡಿಸಬಹುದಾ? ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ ಆಗಲೂ ಪೊಲೀಸ್ ಠಾಣೆಗೆ ಹೋಗಿ ಪೊಲೀಸರನ್ನು ಪ್ರಶ್ನೆ ಮಾಡ್ತೀರಾ? ಇದನ್ನೆಲ್ಲ ಒಪ್ಪಲು ಸಾಧ್ಯವಿಲ್ಲ ಎಂದು ಕಿಡಿಕಾರಿಕಾರಿದೆ.

ನಾಳೆ ಕೋರ್ಟ್ ನಲ್ಲಿ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಗೆ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡಬೇಕು? ಎಂದು ಹೈಕೋರ್ಟ್ ಪ್ರಶ್ನಿಸಿದೆ. ಶಾಸಕರಾದವರು ಶಾಸನ ರೂಪಿಸಬೇಕು. ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಅದನ್ನು ಬಿಟ್ಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಹೇಳಿದೆ.

ಇದೇ ವೇಳೆ ಅರ್ಜಿಯಲ್ಲಿ ಪ್ರತಿವಾದಿಗಳಾದ ಬೆಳ್ತಂಗಡಿ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read