HomeKarnatakaBIG NEWS: ಸಿಎಂ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಚರ್ಚೆ

BIG NEWS: ಸಿಎಂ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ‘ಆಪರೇಷನ್ ಹಸ್ತ’ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಬಿಜೆಪಿಯ ಒಂದೊಂದೇ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಇದೀಗ ಮಾಜಿ ಸಚಿವ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಇನ್ನಷ್ಟು ಇಮ್ಮಡಿಗೊಳಿಸಿದೆ.

ಬೆಂಗಳೂರಿನಲ್ಲಿ ಶಾಸಕ ಶಿವರಾಮ್ ಹೆಬ್ಬಾರ್, ನಿನ್ನೆ ರಾತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ದಿನಗಳ ಹಿಂದೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ನಿನ್ನೆ ಎಂ.ಪಿ.ರೇಣುಕಾಚಾರ್ಯ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಈಗ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಸಿಎಂ ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಅಚ್ಚರಿಗೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular