HomeKarnatakaBIG NEWS: ಬಿಜೆಪಿ ಶಾಸಕ ಸುನೀಲ್ ಕುಮಾರ್ ಪೊಲೀಸ್ ವಶಕ್ಕೆ

BIG NEWS: ಬಿಜೆಪಿ ಶಾಸಕ ಸುನೀಲ್ ಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ನಾಯಕರು ಇಂದೂ ಕೂಡ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಠಾಣೆ ಎದುರು ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಸದಾಶಿವನಗರ ಠಾಣೆ ಎದುರು ಪ್ರತಿಭಟನೆ ನಡೆಸಿರುವ ಶಾಸಕ ಸುನೀಲ್ ಕುಮಾರ್, ಯಾವ ಕಾರಣಕ್ಕೂ ನಮ್ಮ ಹೋರಾಟವನ್ನು ಹಿಂಪಡೆಯಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಶ್ರೀರಾಮ ವಿರೋಧಿ, ಕಾಂಗ್ರೆಸ್ ಸರ್ಕಾರವಿದೆ. ಕರಸೇವಕರನ್ನು ಬಂಧಿಸುವ ಮೂಲಕ ನಮ್ಮನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರಸೇವಕರನ್ನು ಬಂಧಿಸಿ ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸ ಮಾಡಲಾಗುತ್ತಿದೆ. ನಾನೂ ಕರಸೇವಕ ನನ್ನನ್ನೂ ಬಂಧಿಸಿ ಎಂದು ಸದಾಶಿವನಗರ ಪೊಲೀಸ್ ಠಾಣೆ ಮುಂಭಾಗ ಸುನೀಲ್ ಕುಮಾರ್ ಪೋಸ್ಟರ್ ಹಿಡಿದು ಧರಣಿ ಕುಳಿತಿದ್ದಾರೆ. ಈ ವೇಳೆ ಧರಣಿ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಸುನೀಲ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular