
ತುಮಕೂರು ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ, ಸಂಸದ ಡಿ.ಕೆ.ಸುರೇಶ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೂ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಎರಡು ದಿನಗಳ ಹಿಂದೆ ಶಾಸಕ ಸುರೇಶ್ ಗೌಡ, ಡಿ.ಕೆ.ಸುರೇಶ್ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಬಿಜೆಪಿ ಶಾಸಕರ ಭೇಟಿ ಬೆನ್ನಲ್ಲೇ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರೊಂದಿಗೂ ಚರ್ಚೆ ನಡೆದಿದ್ದು, ಅವರನ್ನೂ ಕಾಂಗ್ರೆಸ್ ಗೆ ಸೆಳೆಯುವ ತಂತ್ರ ಹೆಣೆಯಲಾಗಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಪ್ರಭಾವಿ ಬಿಜೆಪಿ ನಾಯಕರಿಬ್ಬರನ್ನು ಪಕ್ಷಕ್ಕೆ ಸೇರಿಸಿಕೊಂಡು ತುಮಕೂರು ಲೋಕಸಭಾ ಟಿಕೆಟ್ ನೀಡುವ ಬಗ್ಗೆಯೂ ಭಾರಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

