HomeKarnataka42 ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದ ಗುಜರಾತ್ ಮಾದರಿ ಬದಲು ಗೆಲ್ಲುವ ಕುದುರೆಗಳಿಗೆ ಮಣೆ: ಹೆಚ್ಚಿನ ಹಾಲಿ...

42 ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದ ಗುಜರಾತ್ ಮಾದರಿ ಬದಲು ಗೆಲ್ಲುವ ಕುದುರೆಗಳಿಗೆ ಮಣೆ: ಹೆಚ್ಚಿನ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಸಾಧ್ಯತೆ

ಬೆಂಗಳೂರು: ಆಡಳಿತ ವಿರೋಧಿ ಅಲೆ ಇದ್ದ ಗುಜರಾತ್ ನಲ್ಲಿ 42 ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದ ಬಿಜೆಪಿ ಕರ್ನಾಟಕದಲ್ಲಿ ಗುಜರಾತ್ ಮಾದರಿ ಅನುಸರಿಸುವ ಬದಲಿಗೆ ಗೆಲ್ಲುವ ಕುದುರೆಗಳಿಗೆ ಮಣೆ ಹಾಕಲು ಮುಂದಾಗಿದೆ.

ಹಾಲಿ ಶಾಸಕರಲ್ಲಿ ಹೆಚ್ಚಿನವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಿದೆ. ಹೊಸ ಮುಖಗಳ ಬದಲಿಗೆ ಹಾಲಿ ಶಾಸಕರಿಗೆ ಮಣೆ ಹಾಕಲು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಜರಾತ್ ನಲ್ಲಿ 42 ಶಾಸಕರಿಗೆ ಟಿಕೆಟ್ ನಿರಾಕರಿಸಿ ಹೊಸ ಮುಖಗಳಿಗೆ ಆದ್ಯತೆ ನೀಡಿದ ಪ್ರಯೋಗ ಯಶಸ್ವಿಯಾಗಿತ್ತು. ಕರ್ನಾಟಕದಲ್ಲಿ ಅಂತಹ ಪ್ರಯೋಗ ಮಾಡುವ ಸಾಧ್ಯತೆ ಇಲ್ಲ. ಗುಜರಾತ್ ಮಾದರಿ ಕರ್ನಾಟಕದಲ್ಲಿ ಫಲ ಕೊಡಲಾರದು ಎನ್ನುವ ಯೋಚನೆಯಲ್ಲಿರುವ ಬಿಜೆಪಿ ವರಿಷ್ಠರು ಗೆಲ್ಲುವ ಸಾಧ್ಯತೆ ಹೊಂದಿರುವ ಹಾಲಿ ಶಾಸಕರಿಗೆ ಟಿಕೆಟ್ ಕೊಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular