HomeKarnatakaBREAKING NEWS: ಸಚಿವ ಸತೀಶ್ ಜಾರಕಿಹೊಳಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್: ಅವರು ಮುಖ್ಯಮಂತ್ರಿಯಾದರೆ ನಮ್ಮ...

BREAKING NEWS: ಸಚಿವ ಸತೀಶ್ ಜಾರಕಿಹೊಳಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್: ಅವರು ಮುಖ್ಯಮಂತ್ರಿಯಾದರೆ ನಮ್ಮ ಬೆಂಬಲವಿದೆ ಎಂದ ವಿಠ್ಠಲ ಹಲಗೇಕರ್

ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿದ್ದು, ಈ ನಡುವೆ ಬಿಜೆಪಿ ಶಾಸಕರೊಬ್ಬರು ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ಸಿಎಂ ರೇಸ್ ನಲ್ಲಿದ್ದಾರೆ. ಅವರು ಮುಖ್ಯಮಂತ್ರಿಯಾದರೆ ನಮಗೆ ಸಂತೋಷ ಎಂದು ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್, ಉತ್ತರ ಕರ್ನಾಟಕದವರಾದ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ನಮಗೆ ಸಂತೋಷವಾಗುತ್ತದೆ. ಬಿಜೆಪಿ ಪಕ್ಷದಿಂದ ಯಾರೂ ಅವರಿಗೆ ಬೆಂಬಲ ಕೊಡುವುದಿಲ್ಲ. ಆದರೆ ವೈಯಕ್ತಿಕವಾಗಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆದರೆ ನಮ್ಮ ಬೆಂಬಲ ಇದ್ದೆ ಇರುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರು ಸಿಎಂ ಆದ್ರೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತವೆ. ಈ ನಿಟ್ಟಿನಲ್ಲಿ ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular