ಗದಗ: ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗದಗದಲ್ಲಿ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದ್ದು, ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡ ಆಗಿದ್ದಾರೆ. ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶಾಸಕ ಚಂದ್ರು ಲಮಾಣಿ ಹಗೂ ಅವರ ಇಬ್ಬರು ಪಿಎ ಗಳು ಕೂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಚಂದ್ರು ಲಮಾಣಿ, ಪಿಎಗಳಾದ ಮಂಜುನಾಥ್ ಹಾಗೂ ಗುರು ಮೂವರನ್ನು ವಶಕ್ಕೆ ಪಡೆಯಲಾಗಿದೆ.

