ಬೆಂಗಳೂರು: ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಶಿವಾಅಜಿನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುಣ್ಯೇಶ್ ಎಂದು ಗುರುತಿಸಲಾಗಿದೆ. ಈತ ಕಾಟನ್ ಬಾಕ್ಸ್ ನಲ್ಲಿ ಮೊಟ್ಟೆಯನ್ನು ಸಂಗ್ರಹಿಸಿಟ್ಟುಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿ ಕಚೆರಿಬಳಿ ಈತ ಮೊಟ್ಟೆಯನ್ನು ಯಾಕೆ ಇಟ್ಟುಕೊಂಡಿದ್ದ ಹಾಗೂ ಯಾರ ಸೂಚನೆ ಮೇರೆಗೆ ಬಿಜೆಪಿ ಶಾಸಕನ ಮೇಲೆ ಮೊಟ್ಟೆ ದಾಳಿ ನಡೆಸಿದ್ದಾನೆ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಬಂಧಿತ ಆರೋಪಿ ಹಿಂದೆ ಇನ್ನಷ್ಟು ಜನರು ಇರುವ ಸಾಧ್ಯತೆ ಇದೆ. ಆರೋಪಿಯನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ನೀಟ್ ಅಕ್ರಮದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಜುಲೈ 22ರಂದು ಬಿಜೆಪಿ ನಾಯಕರು ಕೆಪಿಸಿಸಿ ಕಚೇರಿ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಕೆಪಿಸಿಸಿ ಕಚೇರಿ ಬಳಿ ಬಂದ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಹಲ್ಲೆಗೆ ಯತ್ನಿಸಿದ್ದರು. ಇದೀಗ ಮೊಟ್ಟೆ ಎಸೆದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

