BIG NEWS: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ; ಶಾಸಕ ಮುನಿರತ್ನ ಹೇಳಿದ್ದೇನು?

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಹೆಸರು ಕೇಳಿಬಂದಿದ್ದು, ಈ ಬಗ್ಗೆ ಸ್ವತಃ ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಮುನಿರತ್ನ, ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಲೋಕಸಭಾ ಚುನಾವಣೆ ಮುಗಿಯುವವರೆಗೂ ಹೊರಗೆ ಇರಬಾರದು ಎಂದು ನನ್ನನ್ನು ತಿಹಾರ್ ಜೈಲಿಗೆ ಕಳಿಸಬೇಕು ಎಂಬ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮುನಿರತ್ನ ಮನೆ ಮುಂದೆ ನಡೆಯುವ ಅಪಘಾತ ಪ್ರಕರಣಗಳನ್ನೂ ನನ್ನ ತಲೆಗೆ ಕಟ್ಟುವ ಕೆಲಸವಾಗುತ್ತಿದೆ ಎಂದು ಹೇಳಿದರು. ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ನಾನು ಮಾತನಾಡುವುದು ಸರಿಯಲ್ಲ. ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಹೊರಬಂದ ಬಳಿಕ ನಾನೇ ಮಾತನಾಡುತ್ತೇನೆ ಎಂದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read