HomeLatest NewsBREAKING: ಕಲಬುರಗಿ ಡಿಸಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ MLC ಎನ್.ರವಿಕುಮಾರ್ ಗೆ ತಾತ್ಕಾಲಿಕ ರಿಲೀಫ್...

BREAKING: ಕಲಬುರಗಿ ಡಿಸಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ MLC ಎನ್.ರವಿಕುಮಾರ್ ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಕಲಬುರಗಿ ಡಿಸಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬ್ಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಕಲಬುರಗಿ ಡಿಸಿ ಪಾಕಿಸ್ತಾನದಿಂದ ಬಂದವರಂತೆ ಕಾಣುತ್ತಾರೆ ಎಂದು ಹೇಲುವ ಮೂಲಕ ಎಂಎಲ್ ಸಿ ರವಿಕುಮಾರ್ ವಿವಾದ ಸೃಷ್ಟಿಸಿದ್ದರು. ರವಿಕುಮಾರ್ ವಿರುದ್ಧ ಕಲಬುರಗಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ದ ರವಿಕುಮಾರ್, ಹೈಕೋರ್ಟ್ ಮೆಟ್ತಿಲೇರಿದ್ದರು. ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಹಾಗೂ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎನ್.ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೇ ರವಿಕುಮಾರ್ ಪೊಲೀಸರ ವಿಚಾರಣೆಗೆ ಸಹಕರಿಸಬೇಕು ಎಂದು ತಿಳಿಸಿದೆ. ಈ ಮೂಲಕ ಎನ್.ರವಿಕುಮಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular