HomeLatest NewsBREAKING: ಮಹಿಳಾ ಅಧಿಕಾರಿಗಳ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಬಿಜೆಪಿ MLC: ಸಿಎಸ್ ವಿರುದ್ಧವೇ ಅವಹೇಳನಕಾರಿ...

BREAKING: ಮಹಿಳಾ ಅಧಿಕಾರಿಗಳ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಬಿಜೆಪಿ MLC: ಸಿಎಸ್ ವಿರುದ್ಧವೇ ಅವಹೇಳನಕಾರಿ ಹೇಳಿಕೆ: ರವಿಕುಮಾರ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ಎಂಎಲ್ ಸಿ ರವಿಕುಮಾರ್ ಮಹಿಳಾ ಅಧಿಕಾರಿಗಳ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಮಾತನಾಡಿದ್ದು, ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಎಲ್ ಸಿ ರವಿಕುಮಾರ್ ವಿರುದ್ಧ ಪರಿಷತ್ ಸಭಾಪತಿಗೆ ಕಾಂಗ್ರೆಸ್ ನಿಯೋಗ ದೂರು ನೀಡಿದೆ.

ಬಿಜೆಪಿ ಎಂಎಲ್ ಸಿ ರವಿಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಈ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಕಲಬುರಗಿ ಡಿಸಿ ವಿರುದ್ಧವೂ ಅವಹೇಳನಕಾರಿ ಹೇಳಿಕೆ ನೀಡಿದ್ದರು. ರವಿಕುಮಾರ್ ಹೆಣ್ಣುಮಕ್ಕಳ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಎಂಎಲ್ ಸಿ ಸ್ಥಾನದಿಂದ ರವಿಕುಮಾರ್ ರನ್ನು ವಜಾಗೊಳಿಸುವಂತೆ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಮನೋಹರ್ ನೇತೃತ್ವದ ಕಾಂಗ್ರೆಸ್ ನಿಯೋಗ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿ ಮನವಿ ಮಾಡಿದೆ.

ಜೂನ್ 30ರಂದು ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಬಿಜೆಪಿ ನಿಯೋಗ ಸಿಎಸ್ ಶಾಲಿನಿ ರಜನೀಶ್ ಅವರಿಗೆ ದೂರು ನೀಡಲು ತೆರಳಿತ್ತು. ಈ ವೇಳೆ ಶಾಲಿನಿ ರಜನೀಶ್ ಬಿಜೆಪಿ ನಿಯೋಗಕ್ಕೆ ಸಿಕ್ಕಿರಲಿಲ್ಲ. ಸಿಎಸ್ ಶಾಲಿನಿ ರಜನೀಶ್ ಭೇಟಿಯಾಗದ ಕಾರಣಕ್ಕೆ ಎಂಎಲ್ ಸಿ ರವಿಕುಮಾರ್, ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಪದಗಳನ್ನು ಬಳಸಿ ವಾಗ್ದಾಳಿ ನಡೆಸಿದ್ದರು. ಕೆಲ ದಿನಗಳ ಹಿಂದೆ ರವಿ ಕುಮಾರ್ ಕಲಬುರಗಿ ಡಿಸಿ ಫೌಜಿಯಾ ತರನ್ನಮ್ ವಿರುದ್ಧವೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ರವಿಕುಮಾರ್ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಸಿಎಸ್ ಶಾಲಿನಿ ರಜನೀಶ್ ಅವರನ್ನು ಅವಮಾನಿಸಿದ್ದು, ಕಾಂಗ್ರೆಸ್ ಸಭಾಪತಿ ಹೊರಟ್ಟಿ ಅವರಿಗೆ ದೂರು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular