HomeIndiaBIG NEWS: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಪುತ್ರನ ಕಾರು ಅಪಘಾತ; ಇಬ್ಬರು ದುರ್ಮರಣ

BIG NEWS: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಪುತ್ರನ ಕಾರು ಅಪಘಾತ; ಇಬ್ಬರು ದುರ್ಮರಣ

ಲಖನೌ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಪುತ್ರ ಕರಣ್ ಭೂಷಣ್ ಗೆ ಸೇರಿದ ಟೊಯೊಟಾ ಫಾರ್ಚುನರ್ ಎಸ್ ಯುವಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಗೋಂಡಾದಲ್ಲಿ ಈ ಘಟನೆ ನಡೆದಿದ್ದು, 17 ವರ್ಷದ ರೆಹಾನ್ ಹಾಗೂ 24 ವರ್ಷದ ಶಹಜಾನ್ ಮೃತ ಯುವಕರು. ಔಷಧಿ ಖರೀದಿಗೆಂದು ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಎಸ್ ಯುವಿ ವಾಹನ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಾಯಗೊಂಡಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಯುವಕರ ತಾಯಿ ಚಂದಾ ಬೇಗಂ ದೂರು ದಾಖಲಿಸಿದ್ದು, ಪ್ರಕರಣ ಸಂಬಂಧ ಎಸ್ ಯುವಿ ಚಾಲಕನನ್ನು ಬಂಧಿಸಿದಾರೆ. ಅಪಘಾತದ ವೇಳೆ ವಾಹನದಲ್ಲಿ ಕರಣ್ ಭೂಷಣ್ ಇದ್ದರೇ? ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular