HomeKarnataka'ಸೋಮಾರಿ ಸಿದ್ದ' ಪದ ಬಳಕೆ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

‘ಸೋಮಾರಿ ಸಿದ್ದ’ ಪದ ಬಳಕೆ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ನಾನು ಸೋಮಾರಿ ಸಿದ್ದ ಅಲ್ಲ ಎಂದು ಹೇಳಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 504, 153ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮಾರಿ ಎಂದು ಟೀಕಿಸಿದ್ದರು. ಸಿಎಂ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿನ್ನೆ ಹುಣಸೂರಿನಲ್ಲಿ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಬಗ್ಗೆ ಪ್ರತಾಪ್ ಸಿಂಹ ಟೀಕೆ ಮಾಡಿದ್ದರು. ಈ ಸಂಬಂಧ ಮೈಸೂರು ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿಜಯಕುಮಾರ್ ನೀಡಿದ ದೂರಿನ ಅನ್ವಯ ಕೇಸು ದಾಖಲಿಸಲಾಗಿದೆ. ನಿನ್ನೆ ಹೇಳಿಕೆ ಖಂಡಿಸಿ ಮೈಸೂರಿನ ಪ್ರತಾಪ ಸಿಂಹ ಅವರ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular