HomeKarnatakaಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್ ಸೇರಿ 44 ಮಂದಿ ವಿರುದ್ಧ...

ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್ ಸೇರಿ 44 ಮಂದಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲಿನ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 44 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿ ಸೇರಿದಂತೆ 44 ಮಂದಿ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಹೈಕೋರ್ಟ್ ಆದೇಶದಂತೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಆದರೂ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಹೈಡ್ರಾಮಾ ನಡೆದಿತ್ತು. ಹಲಸೂರು ಗೇಟ್ ಪೊಲೀಸ್ ಠಾಣೆಯ ಪಿಐ ಹನುಮಂತ ಭಜಂತ್ರಿ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular