HomeIndia13 ವರ್ಷದ ಹಿಂದಿನ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಸಂಸದನಿಗೆ 2 ವರ್ಷ ಜೈಲು ಶಿಕ್ಷೆ: ಲೋಕಸಭೆಯಿಂದ...

13 ವರ್ಷದ ಹಿಂದಿನ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಸಂಸದನಿಗೆ 2 ವರ್ಷ ಜೈಲು ಶಿಕ್ಷೆ: ಲೋಕಸಭೆಯಿಂದ ಅನರ್ಹ ಸಾಧ್ಯತೆ

ನವದೆಹಲಿ: 2011ರ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಸಂಸದ ರಾಮ್ ಶಂಕರ್ ಕಥೇರಿಯಾ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಲೋಕಸಭೆಯಿಂದ ಅನರ್ಹಗೊಳಿಸುವ ಸಾಧ್ಯತೆ ಇದೆ.

ಸಂಸದ ರಾಮ್ ಶಂಕರ್ ಕಥೇರಿಯಾ ಅವರಿಗೆ ಆಗ್ರಾ ನ್ಯಾಯಾಲಯ ಶನಿವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾಜಿ ಕೇಂದ್ರ ಸಚಿವರಾಗಿರುವ ಕಥೇರಿಯಾ ಅವರು 2011 ರಲ್ಲಿ ವಿದ್ಯುತ್ ಸರಬರಾಜು ಕಂಪನಿಯ ಉದ್ಯೋಗಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರು ಉತ್ತರ ಪ್ರದೇಶದ ಇಟಾವಾದಿಂದ ಹಾಲಿ ಲೋಕಸಭಾ ಸದಸ್ಯರಾಗಿದ್ದಾರೆ. ನ್ಯಾಯಾಲಯದ ಆದೇಶದಿಂದ ಕಥೇರಿಯಾ ಲೋಕಸಭೆಯಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ.

ಚುನಾಯಿತ ಪ್ರತಿನಿಧಿಯು ಯಾವುದೇ ಅಪರಾಧಕ್ಕಾಗಿ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಶಿಕ್ಷೆಯನ್ನು ಅನುಭವಿಸಿದರೆ, 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಅಡಿಯಲ್ಲಿ ತಕ್ಷಣದ ಅನರ್ಹತೆಯನ್ನು ಎದುರಿಸಬೇಕಾಗುತ್ತದೆ. ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular