ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸ, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ .

ಕೇಂದದ್ರ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸುತ್ತಿದ್ದೇವೆ. ಜಿಎಸ್ಟಿ ಸರಳೀಕರಣದಿಂದ ರಾಜ್ಯ ಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ. ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ರೂಪಾಯಿ ನಷ್ಟವಾಗಲಿದೆ. ಕೇಂದ್ರ ಸರ್ಕಾರವು ಎನ್ ಡಿ ಎ ಆಡಳಿತದಡಿ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ.

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read