ನವದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪಕ್ಷದ ಸಂಘಟನೆಯಲ್ಲಿ ಭಾರಿ ಪ್ರಮಾಣದ ಬದಲಾವಣೆ ಮಾಡಲಾಗಿದೆ. ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಅನುಭವಿ ಹಾಗೂ ಪ್ರಮುಖ ನಾಯಕರಿಗೆ ಹೊಸ ಜವಾಬ್ದಾರಿ ಹಂಚಿಕೆ ಮಾಡಲಾಗಿದ್ದು, ಕೇಂದ್ರ ಬಿಜೆಪಿ ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಹೊಸ ಪಟ್ಟಿಯ ಪ್ರಕಾರ, 13 ರಾಷ್ಟ್ರೀಯ ಉಪಾಧ್ಯಕ್ಷರು, 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ 16 ಮೋರ್ಚಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
https://x.com/NitinNabin/status/2089291401507025280
ಹೊಸ ಪದಾಧಿಕಾರಿಗಳ ವಿವರ:
ರಾಷ್ಟ್ರೀಯ ಉಪಾಧ್ಯಕ್ಷರು: ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ತೀರತ್ ಸಿಂಗ್ ರಾವತ್, ರಾಮ್ ಮಾಧವ್, ವೈಜಯಂತ್ ಜಯ್ ಪಾಂಡಾ, ಡಿ. ಪುರಂದೇಶ್ವರಿ, ರೇಖಾ ವರ್ಮಾ, ವರ್ಷಾಬೆನ್ ನರೇಂದ್ರಭಾಯ್ ದೋಷಿ, ಡಾ. ಭಾರತಿ ಪ್ರವೀಣ್ ಪವಾರ್, ಸರ್ದಾರ್ ಮನ್ಪ್ರೀತ್ ಸಿಂಗ್ ಬಾದಲ್, ಲಾಲ್ ಸಿಂಗ್ ಆರ್ಯ, ಪ್ರೊ. ಎಂ. ನಾಗರಾಜ್ (ಕರ್ನಾಟಕ), ಪ್ರೊ. ತಾರಿಕ್ ಮನ್ಸೂರ್ ಮತ್ತು ಡಾ. ಮಧುಚಂದ್ರ ಕರ್.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ): ಕರ್ನಾಟಕದ ಬಿ.ಎಲ್. ಸಂತೋಷ್ ಅವರನ್ನು ಈ ಪ್ರಮುಖ ಹುದ್ದೆಯಲ್ಲಿ ಮುಂದುವರಿಸಲಾಗಿದೆ.
ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಗಳು: ಶಿವಪ್ರಕಾಶ್ ಹಾಗೂ ಸೌದನ್ ಸಿಂಗ್.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು: ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಪ್ರಧಾನ ಕಾರ್ಯದರ್ಶಿ ಪಟ್ಟ ನೀಡಲಾಗಿದ್ದು, ಪಟ್ಟಿಯಲ್ಲಿರುವ ಏಕೈಕ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಉಳಿದಂತೆ ವಿನೋದ್ ತಾವ್ಡೆ, ಸುನಿಲ್ ಬನ್ಸಾಲ್, ಬಿಪ್ಲಬ್ ಕುಮಾರ್ ದೇವ್, ಸತೀಶ್ ಪೂನಿಯಾ, ಗಜೇಂದ್ರ ಪಟೇಲ್, ಹರೀಶ್ ದ್ವಿವೇದಿ ಮತ್ತು ಸಂಜಯ್ ಭಾಟಿಯಾ ನೇಮಕಗೊಂಡಿದ್ದಾರೆ.
ರಾಷ್ಟ್ರೀಯ ಕಾರ್ಯದರ್ಶಿಗಳು: ಕವಿತಾ ಪಾಟಿದಾರ್, ಕೆ. ಸುರೇಂದ್ರನ್, ಡಾ. ಭೋಲಾ ಸಿಂಗ್, ಡಾ. ಪ್ರದೀಪ್ ವರ್ಮಾ, ಜಗದೀಶ್ ಈಶ್ವರ್ಭಾಯ್ ಪಟೇಲ್, ಡಾ. ಸಂದೀಪ್ ಪಾಠಕ್, ಫಾಂಗ್ನಾನ್ ಕೊನ್ಯಾಕ್, ಸಂಗೀತಾ ಯಾದವ್, ಅನಿಲ್ ಆಂಟನಿ, ಎಂ. ವೆಂಕಟೇಶನ್, ಮನೋಜ್ ಟಿಗ್ಗಾ, ಸಿದ್ಧಾರ್ಥ ಶಂಭು, ಡಾ. ಸ್ವದೇಶ್ ಸಿಂಗ್, ಮೃಗಾಂಕ ದೇವ್ ಬರ್ಮನ್, ರೋಹನ್ ಗುಪ್ತಾ ಹಾಗೂ ಜೈ ಪ್ರಕಾಶ್.
ಯುವ ಮೋರ್ಚಾ ಅಧ್ಯಕ್ಷರಾಗಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಬದಲಿಗೆ ಗುಜರಾತ್ ಮೂಲದ ಡಾ. ಹೇಮಾಂಗ್ ಜೋಶಿ ಅವರನ್ನು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಾಮಾಜಿಕ ಜಾಲತಾಣ ಮತ್ತು ಐಟಿ ಸೆಲ್ ಮುಖ್ಯಸ್ಥರಾಗಿದ್ದ ಅಮಿತ್ ಮಾಳವೀಯ ಅವರಿಗೆ ಈ ಬಾರಿ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ದೀಪಕ್ ಮಹಾಸ್ಕರೆ ಅವರನ್ನು ಬಿಜೆಪಿಯ ಹೊಸ ಸಾಮಾಜಿಕ ಜಾಲತಾಣ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಮಾಧ್ಯಮ ವಿಭಾಗದ ಜವಾಬ್ದಾರಿಯಲ್ಲಿ ಅನಿಲ್ ಬಲೂನಿ ಮುಂದುವರಿಯಲಿದ್ದಾರೆ.

