BIG NEWS: ನಾನೂ ರಾಮ ಭಕ್ತ ನನ್ನನ್ನೂ ಬಂಧಿಸಿ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರಿಂದ ಮತ್ತೊಂದು ಅಭಿಯಾನ ಆರಂಭ

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಅಭಿಯಾನ ಆರಂಭಿಸಿದ್ದಾರೆ.

ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ಫೇಸ್ ಬುಕ್, ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಫೋಟೋ ಹಾಕಿ ಹೊಸ ಅಭಿಯಾನ ಆರಂಭಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು, ಪ್ರೊಫೈಲ್ ಫೋಟೋ ಬದಲಿಸಿ ‘ನಾನೂ ರಾಮ ಭಕ್ತ, ನಾನೂ ಕರಸೇವಕ ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರೇ’ ಎಂದು ಪೋಸ್ಟರ್ ಪ್ರಕಟಿಸಿದ್ದಾರೆ.

ಈ ಬಗ್ಗೆ ಶಾಸಕ ಸುನೀಲ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಕರಸೇವಕರು ಇಂದಿಗೂ ಇದ್ದಾರೆ. ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿಯೇ ಸರ್ಕಾರ ರಾಮ ಭಕ್ತರನ್ನು ಭಯ ಪಡಿಸುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ರಾಮ ಭಕ್ತರನ್ನು ಕ್ರಿಮಿನಲ್ ಗಳಿಗೆ ಹೋಲಿಕೆ ಮಾಡುತ್ತಿದ್ದಾರೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದವರು ಕಾಂಗ್ರೆಸ್ ಗೆ ಅಮಾಯಕರು. ಸರ್ಕಾರದ ಈ ನಡೆ ಸರಿಯಲ್ಲ. ನನ್ನ ಮೇಲು ಹತ್ತಾರು ಕೇಸುಗಳಿವೆ. ಹಾಗಾದ್ರೆ ನಾನು ಅಪರಾದಿಯೇ? ಈ ಹೋರಾಟ ಇಲ್ಲಿಗೆ ನಿಲ್ಲಲ್ಲ. ಇಂದಿನಿಂದ ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನವನ್ನು ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read