BIG NEWS: ಸಿಎಂ ಸಿದ್ದರಾಮಯ್ಯ ಇಳಿಸಲು ಸಂಚು; ಡಿಕೆಶಿ ಮಾತಿನಂತೆ ವಿಜಯೇಂದ್ರ ಪಾದಯಾತ್ರೆ; ಯತ್ನಾಳ್ ಆರೋಪ

ಬೆಳಗಾವಿ: ಮುಡಾ ಹಗರಣ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಸ್ವಪಕ್ಷದ ನಾಯಕರ ವಿರುದ್ಧವೇ ಕಿಡಿ ಕಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಡಿಕೆಶಿ ಮಾತಿನಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಯತ್ನಾಳ್, ಮುಡಾ ಹೋರಾಟ ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಡಿ.ಕೆ.ಶಿವಕುಮಾರ್ ಮಾತಿನಂತೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲು ಬಿ.ವೈ.ವಿಜಯೇಂದ್ರ ಮಾಡುತ್ತಿರುವ ಹೋರಟವಿದು ಎಂದು ಟಾಂಗ್ ನೀಡಿದ್ದಾರೆ.

ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಬಿಜೆಪಿಯಲ್ಲಿಯೇ ಇದ್ದಾಗ ನಡೆದಿರುವ ಹಗರಣವಿದು. ಈಗ ಅವರು ಕಾಂಗ್ರೆಸ್ ಸೇರಿದ್ದಾರೆ. ರಾಜೀವ್ ಯಾರ ನಿರ್ದೇಶನದ ಮೇರೆಗೆ ಕಾಂಗ್ರೆಸ್ ಸೇರಿದ ಎಂಬುದು ಎಲ್ಲರಿಗೂ ಗೊತ್ತಿದೆ. ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣವಿದೆ. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಡಲು ವಿಜಯೇಂದ್ರ ನಡೆಸುತ್ತಿರುವ ಹೊರಾಟವಿದು ಎಂಬುದನ್ನು ಬಹಿರಂಗಪಡಿಸಬೇಕು. ಡಿ.ಕೆ.ಶಿವಕುಮಾರ್ ಆದೇಶದಂತೆ ಇವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read