HomeKarnatakaBIG NEWS: ದಸರಾ ಬಳಿಕ ಬಿಜೆಪಿಯಿಂದ ಮತ್ತೊಂದು ಪಾದಯಾತ್ರೆ

BIG NEWS: ದಸರಾ ಬಳಿಕ ಬಿಜೆಪಿಯಿಂದ ಮತ್ತೊಂದು ಪಾದಯಾತ್ರೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಜ್ಜಾಗಿದೆ. ದಸರಾ ಬಳಿಕ ಶಾಸಕರಾದ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ನೇತೃತ್ವದ ಬಿಜೆಪಿಯ ಮತ್ತೊಂದು ಟೀಂ ನಿಂದ ಪಾದಯಾತ್ರೆ ಆರಂಭವಾಗಲಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ವಿರುದ್ಧ ಪಾದಯಾತ್ರೆ ನಡೆಸಲು ಬಿಜೆಪಿಯ ಮತ್ತೊಂದು ಟೀಂ ತೀರ್ಮಾನಿಸಿದೆ. ಬಸವಕಲ್ಯಾಣದಿಂದ ಬಳ್ಳಾರಿಯವರೆಗೂ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಪಾದಯಾತ್ರೆಯ ರೂಪುರೇಷೆಗಳ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ಪ್ಲಾನ್ ಸಲ್ಲಿಕೆ ಮಾಡಲಾಗಿದೆ. ಪ್ಲಾನ್ ಸ್ವೀಕರಿಸಿರುವ ಹೈಕಮಾಂಡ್ ಕಾಯುವಂತೆ ತಿಳಿಸಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular