ಮೋದಿ ಸರ್ಕಾರಕ್ಕೆ 9 ವರ್ಷ ತುಂಬಿದ ಹಿನ್ನೆಲೆ ಇಂದಿನಿಂದ 1 ತಿಂಗಳು ಬಿಜೆಪಿ ಮಹಾಸಂಪರ್ಕ ಅಭಿಯಾನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದಿನಿಂದ ಜೂನ್ 30ರವರೆಗೆ ಬಿಜೆಪಿ ಮಹಾಸಂಪರ್ಕ ಅಭಿಯಾನ ಕೈಗೊಂಡಿದೆ.

ಸರ್ಕಾರದ ಸಾಧನೆಗಳು, ಯೋಜನೆಗಳ ಬಗ್ಗೆ ಮಾಹಿತಿಯನ್ನು ಮನೆಮನೆಗೆ ತಲುಪಿಸಲು ಅಭಿಯಾನ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ನೇತತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆ ನಂತರ ಕೇಂದ್ರ ಸಚಿವ ಭಗವಂತ್ ಖೂಬಾ ಈ ಬಗ್ಗೆ ಮಾಹಿತಿ ನೀಡಿದ್ದು, ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಮತ್ತು ಫಲಪ್ರದವಾಗಿ 9 ವರ್ಷ ಪೂರ್ಣಗೊಳಿಸಿದ್ದು, ದೇಶಾದ್ಯಂತ ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ, ಕಾರ್ಯ ಮೂಲಸೌಕರ್ಯ ಯೋಜನೆ ಯಶಸ್ವಿ ಅನುಷ್ಠಾನ, ಸಾಮಾಜಿಕ ಸುರಕ್ಷತಾ ಯೋಜನೆ ಜಾರಿ ಸೇರಿದಂತೆ ಅನೇಕ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಜೂನ್ 30ರವರೆಗೆ ಮಹಾಸಂಪರ್ಕ ಅಭಿಯಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಭಿಯಾನದ ಅಂಗವಾಗಿ ಫಲಾನುಭವಿಗಳ ಸಮಾವೇಶ ನಡೆಸಲಿದ್ದು, ಕೇಂದ್ರದ ಅನುದಾನದಿಂದ ಕೈಗೊಂಡ ಮೂಲ ಸೌಕರ್ಯಗಳ ಮಾಹಿತಿ ನೀಡಲಾಗುವುದು. ವ್ಯಾಪಾರಸ್ಥರು, ಪ್ರಭುದ್ಧರ ಸಭೆ, ಯೋಗ ದಿನ ಸೇರಿ ಅನೇಕ ಕಾರ್ಯಕ್ರಮ, ಆಯಾಮಗಳಲ್ಲಿ ಕಾರ್ಯಕರ್ತರು ಕೆಲಸ ಮಾಡಲಿದ್ದಾರೆ. 2024ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ಅಭಿಯಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read