HomeKarnatakaBIG NEWS: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ...

BIG NEWS: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ  ಸರ್ಕಾರದ  ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕೊಲೆಗೆಡುಕ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ನಡೆದ ಜೈನಮುನಿ ಹತ್ಯೆ ಪ್ರಕರಣ, ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಗ್ಯಾರಂಟಿ ಯೋಜನೆಯಲ್ಲೇ ಮುಳುಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ದೋಖಾ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular