HomeKarnatakaಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಲೋಡ್ ಶೆಡ್ಡಿಂಗ್, ಬರ ಪೀಡಿತ ತಾಲೂಕುಗಳ ರೈತರಿಗೆ ಪರಿಹಾರ ವಿತರಣೆ, 42 ಕೋಟಿ ರೂ. ಪ್ರಕರಣ ಸೇರಿದಂತೆ ಕಾನೂನು ಸುವ್ಯವಸ್ಥೆ ಕುಸಿದಿರುವುದನ್ನು ವಿರೋಧಿಸಿ ರಾಜ್ಯದ ಎಲ್ಲಾ ಮಂಡಲ, ಜಿಲ್ಲಾ ಕೇಂದ್ರಗಳಲ್ಲಿ ಅಕ್ಟೋಬರ್ 16ರ ಸೋಮವಾರ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.

ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ರೂ. ನಗದು ಕಮಿಷನ್ ರೂಪದಲ್ಲಿ ಬಂದ ಹಣ ಎನ್ನುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಪರ ದಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಿಲ್ಲ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಅಲ್ಲದೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular