HomeKarnatakaBIG NEWS: ಕೇಂದ್ರದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ...

BIG NEWS: ಕೇಂದ್ರದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಧರಣಿ

ಬೆಂಗಳೂರು: ಅನುದಾನ ಬಿಡುಗಡೆ, ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅತ್ತ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದರೆ ಇತ್ತ ಬೆಂಗಳೂರಿನಲ್ಲಿ ವಿಪಕ್ಷ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.

ಕಾಂಗ್ರೆಸ್ ನ ದೆಹಲಿ ಚಲೋಗೆ ಪ್ರತಿಯಾಗಿ ಬೆಂಗಳೂರಿನಲ್ಲಿ ಬಿಜೆಪಿ ಧರಣಿ ಆರಂಭಿಸಲು ಸಿದ್ಧತೆ ನಡೆಸಿದೆ. ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಧರಣಿ ನಡೆಸಲಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದರೂ ಈವರೆಗೂ ಕುಡಿಯುವ ನೀರು ಸಮಸ್ಯೆ ಬಗೆಹರಿಸುತ್ತಿಲ್ಲ. ಯಾವುದೇ ಬರ ಪರಿಹಾರವನ್ನೂ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಇಂದು ಬಿಜೆಪಿ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular