ಬೆಂಗಳೂರು : ಅಯೋಧ್ಯೆ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು , ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.
ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆಗೆ ಕೆಲವೇ ದಿನಗಳು ಬಾಕಿಯಿದ್ದು, ಇದರ ನಡುವೆ ರಾಜ್ಯ ಸರ್ಕಾರ 31 ವರ್ಷಗಳ ಹಿಂದಿನ ಪ್ರಕರಣವನ್ನು ಪುನಃ ತೆರೆಯುವುದರ ಹಿಂದಿನ ರಾಜ್ಯ ಸರ್ಕಾರದ ಉದ್ದೇಶವನ್ನು ಇದು ಸ್ಪಷ್ಟವಾಗಿ ತೋರಿಸುತ್ತಿದೆ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಪ್ರಕರಣಕ್ಕೆ ಮರು ಜೀವ ನೀಡಿ ಹಿಂದೂ ಕಾಠ್ಯಕರ್ತರನ್ನು ಬಂಧಿಸಿರುವು ದನ್ನು ಖಂಡಿಸುತ್ತೇವೆ. ದೇಶವೇ ಸಂಭ್ರಮದಲ್ಲಿ ಇರು ವಾಗ ರಾಮಭಕ್ತನ ಬಂಧಿಸಲು ನಿಮಗೆಷ್ಟು ಧೈರ್ಯ? ಎಂದು ಗುಡುಗಿದ್ದಾರೆ.
ಶ್ರೀರಾಮ ಜನ್ಮಭೂಮಿಯ ಹೋರಾಟ ಇಂದು ನಿನ್ನೆಯದಲ್ಲ
ಶ್ರೀರಾಮ ಜನ್ಮಭೂಮಿಯ ಹೋರಾಟ ಇಂದು ನಿನ್ನೆಯದಲ್ಲ, 500 ಕ್ಕೂ ಅಧಿಕ ವರ್ಷಗಳ ಹೋರಾಟದ ಇತಿಹಾಸವಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದು ಮತ್ತು ಲೋಕಾರ್ಪಣೆಗೆ ದಿನ ನಿಗದಿಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಭಯ ಹುಟ್ಟಿಸಿದೆ. ಹಳೆಯ ಕೇಸುಗಳನ್ನು ಕೆದಕಿ ಕಾರ್ಯಕರ್ತರನ್ನು ಬೆದರಿಸಲು ಯತ್ನಿಸುತ್ತಿದೆ. ಇದು ಕಾಂಗ್ರೆಸ್ಸಿನ ದ್ವೇಷದ ರಾಜಕಾರಣ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದರು.
https://twitter.com/BJP4Karnataka/status/1742221432829202540