ಬೆಂಗಳೂರು: ಹಾಲು, ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಏಪ್ರಿಲ್ 2ರಿಂದ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಏಪ್ರಿಲ್ 2ರಂದು ಬೆಳಗ್ಗೆ 11 ರಿಂದ ಏಪ್ರಿಲ್ 3ರಂದು ಬೆಳಗ್ಗೆ 11 ಗಂಟೆಯವರೆಗೆ 24 ಗಂಟೆ ಕಾಲ ನಿರಂತರ ಧರಣಿ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸಲು ಬಿಜೆಪಿ ಮುಂದಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಕುರಿತು ಮಾಹಿತಿ ನೀಡಿದ್ದು, ಹಾಲು, ವಿದ್ಯುತ್ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಅವರಿಗೆ ತೀವ್ರ ಹೊರೆಯಾಗುತ್ತದೆ. ಹೀಗಾಗಿ ಬೆಲೆ ಏರಿಕೆ ವಿರುದ್ಧ ನಿರಂತರ ಧರಣಿ ನಡೆಸಲಾಗುವುದು. ಶಾಸಕರು, ಜಿಲ್ಲಾ ಅಧ್ಯಕ್ಷರು, ಪರಾಜಿತ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಏಪ್ರಿಲ್ 4ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಏಪ್ರಿಲ್ 5 ರಂದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.