HomeKarnatakaಬಿಜೆಪಿ ಲೂಟಿ ಮಾಡಿದ ಹಣ, 40 ಪರ್ಸೆಂಟ್ ಕಮಿಷನ್ ರಾಜ್ಯದ ಜನರಿಗೆ ವಾಪಸ್: ರಾಹುಲ್ ಗಾಂಧಿ

ಬಿಜೆಪಿ ಲೂಟಿ ಮಾಡಿದ ಹಣ, 40 ಪರ್ಸೆಂಟ್ ಕಮಿಷನ್ ರಾಜ್ಯದ ಜನರಿಗೆ ವಾಪಸ್: ರಾಹುಲ್ ಗಾಂಧಿ

ಚಾಮರಾಜನಗರ: ರಾಜ್ಯದಲ್ಲಿ 40% ಸರ್ಕಾರ ಇರುವುದು 5 ವರ್ಷದ ಮಕ್ಕಳಿಗೂ ಗೊತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಗರಣಗಳ ದೊಡ್ಡಪಟ್ಟಿಯೇ ಇದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ಸಾವಿರ ಕೋಟಿ ರೂ. ಕೊಟ್ಟರೆ ಸಿಎಂ ಸ್ಥಾನ ಎಂದು ಬಿಜೆಪಿ ಶಾಸಕ ಹೇಳುತ್ತಾರೆ. ಕಳೆದ ಮೂರು ವರ್ಷಗಳಿಂದ ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆದರೂ, ಪ್ರಧಾನಿ ಮೋದಿ ಒಂದೇ ಒಂದು ಮಾತು ಆಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಪ್ರಶ್ನೆಗಳನ್ನು ಕೇಳುತ್ತೇನೆ. ಕರ್ನಾಟಕ -ಮಹಾರಾಷ್ಟ್ರ ಗಡಿ ಗಲಾಟೆ ವೇಳೆ ಪ್ರಧಾನಿ ಮಾತನಾಡಲಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರದ ಕುರಿತು ಮಾತನಾಡುವಂತೆ ಮೋದಿಯವರಿಗೆ ಮನವಿ ಮಾಡುತ್ತೇನೆ. ಅಂತರರಾಜ್ಯ ಕುಡಿಯುವ ನೀರಿನ ಸಮಸ್ಯೆಗೆ ಏನು ಕ್ರಮ ಕೈಗೊಂಡಿದ್ದೀರಿ? ಕರ್ನಾಟಕದಲ್ಲಿ ಪ್ರವಾಹದ ವೇಳೆ ಯಾವ ಕ್ರಮಗಳನ್ನು ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ದೇಶದಲ್ಲಿ ಅಡುಗೆ ಅನಿಲ ಬೆಲೆ ಗಗನಕ್ಕೇರಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ರೈತರಿಂದ ಜಿಎಸ್‌ಟಿ ಸಂಗ್ರಹಿಸಲಾಗುತ್ತಿದೆ. ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ. ಸಣ್ಣ ಉದ್ಯಮಗಳು ಮುಚ್ಚುತ್ತಿವೆ ಎಂದ ಅವರು, ಬಿಜೆಪಿ ಲೂಟಿ ಮಾಡಿರುವ ಹಣವನ್ನು ಜನರಿಗೆ ಹಿಂತಿರುಗಿಸುತ್ತೇವೆ. 40% ಕಮಿಷನ್ ಪಡೆದಿರುವ ಹಣ ಕಾಂಗ್ರೆಸ್ ಪಕ್ಷ ವಾಪಸ್ ನೀಡಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಅಧಿಕಾರಕ್ಕೆ ಬಂದರೆ ಜನರ ಹಣ ಹಿಂತಿರುಗಿಸುತ್ತೇವೆ ಎಂದು ಚಾಮರಾಜನಗರದಲ್ಲಿ ಚುನಾವಣಾ ಸಭೆಯಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular