HomeLive NewsBREAKING NEWS: ಎಫ್ಐಆರ್ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಎಂಎಲ್ ಸಿ ರವಿಕುಮಾರ್

BREAKING NEWS: ಎಫ್ಐಆರ್ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಎಂಎಲ್ ಸಿ ರವಿಕುಮಾರ್

ಬೆಂಗಳೂರು: ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ರವಿಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ತುರ್ತು ವಿಚಾರಣೆಗೆ ರವಿಕುಮಾರ್ ಪರ ವಕೀಲರು ಮನವಿ ಮಾಡಿದ್ದಾರೆ. ಮನವಿ ಪರಿಗಣಿಸಿರುವ ಹೈಕೋರ್ಟ್ ಇಂದು ಮಧ್ಯಾಹ್ನ 2:30ರ ಬಳಿಕ ವಿಚಾರಣೆಗೆ ಸಮ್ಮತಿ ನೀಡಿದೆ.

ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ರವಿಕುಮಾರ್ ವಿರುದ್ಧ ಜೆ.ಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನಾ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರವಿಕುಮಾರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ನಾಗರತ್ನಾ, ರವಿಕುಮಾರ್ ಒಂದು ಹೆಣ್ಣಿಗೆ ಗೌರವವನ್ನು ಕೊಟ್ಟಿಲ್ಲ. ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರವಿ ಕುಮಾರ್ ಅವರಿಗೆ ತಾಯಿ, ತಂಗಿ, ಅಕ್ಕ ಇಲ್ವಾ? ಅವರೆಲ್ಲರೂ ಒಂದು ಹೆಣ್ಣು ತಾನೆ? ರವಿಕುಮಾರ್ ವಿರುದ್ಧ ಮಹಿಳಾ ಆಯೋಗಕ್ಕೂ ದೂರು ನೀಡುತ್ತೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular