HomeKarnatakaBIG NEWS: ಬಿಜೆಪಿ ಅಸಮಾಧಾನಿತರು ಮತ್ತೆ ಆಕ್ಟೀವ್: ಯತ್ನಾಳ್ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಪ್ರತ್ಯೇಕ...

BIG NEWS: ಬಿಜೆಪಿ ಅಸಮಾಧಾನಿತರು ಮತ್ತೆ ಆಕ್ಟೀವ್: ಯತ್ನಾಳ್ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಪ್ರತ್ಯೇಕ ಸಭೆ

ಬೆಂಗಳೂರು: ವಿಧಾನಸಭೆ ಉಪಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿ ಅಸಮಾಧಾನಿತರು ಪತ್ತೆ ಆಕ್ಟೀವ್ ಆಗಿದ್ದು, ಪ್ರತ್ಯೇಕ ಸಭೆ ನಡೆಸಲು ಮುಂದಾಗಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿ.ಎಂ.ಸಿದ್ದೇಶ್ವರ್, ಅರವಿಂದ ಲಿಂಬಾವಳಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಿ, ಬೇರೊಬ್ಬರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ನಡೆಸಲು ಯತ್ನಾಳ್ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸಭೆ ಬಳಿಕ ಶಾಸಕ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular