ಬೆಂಗಳೂರು : ಕರ್ನಾಟಕವನ್ನು ಕತ್ತಲೆಗೆ ದೂಡಲು ಈ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ತಮ್ಮ 4 ವರ್ಷಗಳ ಆಡಳಿತದಲ್ಲಿ ಒಂದೇ ಒಂದು ಯುನಿಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸದೆ, ಬರೀ ಕಮಿಷನ್ ಕೊಳ್ಳೆ ಹೊಡೆಯುವುದರಲ್ಲೇ ಮಗ್ನವಾಗಿದ್ದ BJP Karnataka ಸರ್ಕಾರದ ಪಾಪದ ಫಲವನ್ನು ನಾಡಿನ ಜನ ಅನುಭವಿಸುವಂತಾಗಿದೆ ಎಂದು ಕಿಡಿಕಾರಿದ್ದಾರೆ.
2013 ರಿಂದ 2018ರ ನಮ್ಮ ಸರ್ಕಾರದ ಅವಧಿಯಲ್ಲಿ 11,200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿ, ಒಟ್ಟು ಉತ್ಪಾದನೆಯನ್ನು ದುಪ್ಪಟ್ಟುಗೊಳಿಸಿದ್ದೆವು. ಹಿಂದಿನ ಬಿಜೆಪಿ ಸರ್ಕಾರ ಸೌರ ವಿದ್ಯುತ್, ಪವನ ವಿದ್ಯುತ್, ಥರ್ಮಲ್ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವತ್ತ ಗಮನ ಹರಿಸಿ, ಸೂಕ್ತ ಕ್ರಮ ಕೈಗೊಂಡಿದ್ದರೆ ಇಂದಿನ ಪರಿಸ್ಥಿತಿಯೇ ಬೇರೆಯದಾಗಿರುತ್ತಿತ್ತು ಎಂದಿದ್ದಾರೆ.
ಕರ್ನಾಟಕವನ್ನು ಕತ್ತಲಿಗೆ ದೂಡಿದ ಬಿಜೆಪಿಯ ಕರ್ಮಕಾಂಡಗಳನ್ನು ತಿಳಿಯಲು ಈ ವೀಡಿಯೋ ನೋಡಿ.
https://twitter.com/siddaramaiah/status/1715318317685317973?ref_src=twsrc%5Egoogle%7Ctwcamp%5Eserp%7Ctwgr%5Etweet