BREAKING: ಎಸ್.ಎ.ರವೀಂದ್ರನಾಥ್ ಗೆ ಕೈತಪ್ಪಿದ ಬಿಜೆಪಿ ಟಿಕೆಟ್; ಬೆಂಬಲಿಗನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ

ದಾವಣಗೆರೆ: ಸಂಸದ ಜಿ.ಎಂ.ಸಿದ್ದೇಶ್ವರ್ ಪತ್ನಿ ಗಾಯತ್ರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಅಸಮಾಧನ ಭುಗಿಲೆದ್ದಿದ್ದು, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಎಸ್.ಎ.ರವೀಂದ್ರನಾಥ್ ಅವರ ಶಿರಮಗೊಂಡನಹಳ್ಳಿಯಲ್ಲಿರುವ ಮನೆ ಬಳಿ ಜಮಾವಣೆಗೊಂಡಿರುವ ಬೆಂಬಲಿಗರು, ಸಿದ್ದೇಶ್ವರ್ ಹಠಾವೋ, ದಾವಣಗೆರೆ ಬಚಾವೋ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಎಸ್.ಎ.ರವೀಂದ್ರನಾಥ್ ಬೆಂಬಲಿಗ ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಇಅರರು ಯುವಕನನ್ನು ತಡೆದಿದ್ದಾರೆ. ಎಸ್.ಎ.ರವೀಂದ್ರನಾಥ್ ನಿವಾಸದ ಬಳಿ ಬೆಂಬಲಿಗರು ಹೈಡ್ರಾಮಾ ನಡೆಸಿದ್ದು, ಸ್ಥಳದಲ್ಲಿಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read