HomeKarnatakaSC-ST ಸಮುದಾಯದವರನ್ನು ಕಂಡ್ರೆ ಬಿಜೆಪಿಯವರಿಗೆ ಆಗಲ್ಲ’: ಸಚಿವ ಶಿವರಾಜ್ ತಂಗಡಗಿ ವಾಗ್ಧಾಳಿ

SC-ST ಸಮುದಾಯದವರನ್ನು ಕಂಡ್ರೆ ಬಿಜೆಪಿಯವರಿಗೆ ಆಗಲ್ಲ’: ಸಚಿವ ಶಿವರಾಜ್ ತಂಗಡಗಿ ವಾಗ್ಧಾಳಿ

ಬೆಂಗಳೂರು: ಬಿಜೆಪಿಯವರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC-ST) ಸಮುದಾಯದವರನ್ನು ಕಂಡರೆ ಆಗುವುದಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಬಿಜೆಪಿಯವರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC-ST) ಸಮುದಾಯದವರನ್ನು ಕಂಡರೆ ಆಗುವುದಿಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳದಲ್ಲಿ ಬಿಜೆಪಿ ಮುಖಂಡರು ಹೋಮ-ಹವನ ಮಾಡಿಸಿರುವುದನ್ನೂ ಅವರು ಟೀಕಿಸಿದ್ದಾರೆ.

ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಹೋಮ-ಹವನದ ಮೂಲಕ ಶುದ್ಧೀಕರಣ ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಇದು ಬಿಜೆಪಿಯವರ ಮನಸ್ಥಿತಿಯನ್ನು ತೋರಿಸುತ್ತದೆ” ಎಂದು ಕಿಡಿಕಾರಿದ್ದಾರೆ. ಅಲ್ಲದೇ ಸಚಿವ ನಾಗೇಂದ್ರ ರಾಜೀನಾಮೆಗೂ ಒತ್ತಾಯಿಸುತ್ತಿದ್ದಾರೆ. ಇದನ್ನ ನೋಡಿದ್ರೆ ಬಿಜೆಪಿಯವರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC-ST) ಸಮುದಾಯದವರನ್ನು ಕಂಡರೆ ಆಗುವುದಿಲ್ಲ ಎಂಬಂತೆ ತೋರುತ್ತಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 “ಇಂದು ಖರ್ಗೆ ಅವರು ಭಾಷಣ ಮಾಡಿದ ಸ್ಥಳದಲ್ಲಿ ಹೋಮ-ಹವನ ಮಾಡುತ್ತಾರೆ. ಇದೇ ರೀತಿ ಮುಂದೊಂದು ದಿನ ಛಲವಾದಿ ನಾರಾಯಣಸ್ವಾಮಿ ಅವರ ಕುರ್ಚಿಗೂ ಹೋಮ-ಹವನ ಮಾಡುತ್ತಾರೆಯೇ?” ಎಂದು ಸಚಿವ ಶಿವರಾಜ್ ತಂಗಡಗಿ ಪ್ರಶ್ನಿಸಿದ್ದಾರೆ.

SC-ST ಸಮುದಾಯದ ನಾಯಕರನ್ನು ಬಿಜೆಪಿ ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದು ಆರೋಪಿಸಿದ ಅವರು, ಸಾಮಾಜಿಕ ಸಮಾನತೆ ಮತ್ತು ಸಂವಿಧಾನದ ಆಶಯಗಳನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular