HomeKarnatakaಹಿರಿಯರನ್ನು ಕಡೆಗಣಿಸಬೇಡಿ ಎಂಬ ಮಾತಿಗೆ ಮಣೆ ಹಾಕದ ಹೈಕಮಾಂಡ್: ಡೇಂಜರ್ ಜೋನ್ ನಲ್ಲಿ ಬಿಜೆಪಿ; ಪಕ್ಷ...

ಹಿರಿಯರನ್ನು ಕಡೆಗಣಿಸಬೇಡಿ ಎಂಬ ಮಾತಿಗೆ ಮಣೆ ಹಾಕದ ಹೈಕಮಾಂಡ್: ಡೇಂಜರ್ ಜೋನ್ ನಲ್ಲಿ ಬಿಜೆಪಿ; ಪಕ್ಷ ಕಟ್ಟಿ ಬೆಳೆಸಿದವರಿಗೇ ಸಿಗದ ಟಿಕೆಟ್

ರಾಜ್ಯ ವಿಧಾನಸಭೆ ಚುನಾವಣೆಗೆ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಬಿಜೆಪಿ ಹೈಕಮಾಂಡ್ ರಾಜ್ಯದ ಘಟಾನುಘಟಿ ನಾಯಕರಿಗೆ ಶಾಕ್ ನೀಡಿದೆ.

ರಾಜ್ಯದಲ್ಲಿ ಪಕ್ಷ ಕಟ್ಟಿ ಬೆಳೆಸಿದ ಮತ್ತು ನಿರಂತರವಾಗಿ ಗೆಲುವು ಸಾಧಿಸಿ ಪಕ್ಷಕ್ಕೆ ಭದ್ರ ನೆಲೆ ಒದಗಿಸಿದ ಪ್ರಮುಖ ನಾಯಕರಿಗೇ ಈ ಬಾರಿ ಟಿಕೆಟ್ ನೀಡದಿರುವುದು ಪಕ್ಷದಲ್ಲಿ ಸುನಾಮಿಯನ್ನೇ ಸೃಷ್ಟಿಸಿದೆ. ಬರೋಬ್ಬರಿ 35 ಮಂದಿ ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪುತ್ತಿರುವುದು ಬಿಜೆಪಿಯಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯರನ್ನು ಸಂಪೂರ್ಣವಾಗಿ ಕಡೆಗಣಿಸಬೇಡಿ. ಹಿರಿಯರ ಜೊತೆಗೆ ಹೊಸಬರಿಗೂ ಅವಕಾಶ ಕೊಡಿ ಎಂದು ರಾಜ್ಯ ನಾಯಕರು ಮಾಡಿದ ಮನವಿಗೆ ಬಿಜೆಪಿ ಹೈಕಮಾಂಡ್ ಸ್ಪಂದಿಸಿಲ್ಲ. ಪ್ರಯೋಗಕ್ಕೆ ಮುಂದಾದ ಬಿಜೆಪಿ ವರಿಷ್ಠರು ಪಕ್ಷವನ್ನು ಡೇಂಜರ್ ಜೋನ್ ಗೆ ತಂದಿಟ್ಟಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲಿ ಕೇಳಿ ಬಂದಿವೆ.

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ನಾಯಕರನ್ನೇ ಕಡೆಗಣಿಸುತ್ತಿರುವುದು ಸರಿಯಲ್ಲ. ಹಳಬರ ಜೊತೆಗೆ ಹೊಸಬರಿಗೂ ಅವಕಾಶ ಕೊಡಬೇಕೆಂಬ ಮಾತುಗಳು ಕೇಳಿ ಬಂದಿವೆ. ಆದರೆ ಈಗಾಗಲೇ ಕಾಲ ಮೀರಿ ಹೋಗಿದ್ದು ಬಿಜೆಪಿ ನಾಯಕರು 35 ಮಂದಿಗೆ ಹಿರಿಯರಿಗೆ ಗೇಟ್ ಪಾಸ್ ನೀಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular