HomeKarnatakaBIG NEWS: ರಾಜ್ಯ ಬಿಜೆಪಿ ನಾಯಕರಿಂದ ಮುಂದುವರೆದ ಪ್ರತ್ಯೇಕ ಸಭೆ: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಬಂಡಾಯ...

BIG NEWS: ರಾಜ್ಯ ಬಿಜೆಪಿ ನಾಯಕರಿಂದ ಮುಂದುವರೆದ ಪ್ರತ್ಯೇಕ ಸಭೆ: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಬಂಡಾಯ ನಾಯಕರ ಮಹತ್ವದ ಚರ್ಚೆ

ಬೆಂಗಳೂರು: ಒಂದೆಡೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ. ಮತ್ತೊಂದೆಡೆ ಬಿಜೆಪಿ ಬಂಡಾಯ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದಾರೆ.

ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ನಿವಾಸದಲ್ಲಿ ಬಿಜೆಪಿ ಅಸಮಾಧಾನಿತ ನಾಯಕರ ಸಭೆ ನಡೆದಿದ್ದು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಚಂದ್ರಪ್ಪ, ಶಾಸಕ ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಒಂದೆಡೆ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ. ಒಗ್ಗಟ್ಟಿನ ಮಂತ್ರ ಪಟಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಆದರೆ ಮತ್ತೊಂದೆಡೆ ಅಸಮಾಧಾನಿತ ಬಿಜೆಪಿ ನಯಕರು ಪ್ರತ್ಯೇಕ ಸಭೆ ನಡೆಸುವ ಮೂಲಕ ಬಂಡಾಯ ಸಾರುತ್ತಿದ್ದಾರೆ. ಆರ್.ಎಸ್.ಎಸ್ ಹಾಗೂ ಬಿಜೆಪಿ ಸಮನ್ವಯ ಸಮಿತಿ ಸಭೆ ಬಳಿಕ ನಡೆದ ಎರಡನೇ ಪ್ರತ್ಯೇಕ ಸಭೆ ಇದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular